BREAKING: ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಪ್ರಕರಣ: ಆರೋಪಿ ಪೊಲೀಸ್ ಕಸ್ಟಡಿಗೆ

ನವದೆಹಲಿ: ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ದೆಹಲಿ ಸಿಎಂ ರೇಖಾ ಗುಪ್ತಾ ಅವರ ಮೇಲೆ ಗುಜರಾತ್ ನ ರಾಜ್ ಕೋಟ್ ನ ರಾಜೇಶ್ ಖಿಮ್ಮಿಭಾಯ್ ಎಂಬಾತ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ್ದ ತಕ್ಷಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಯನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ 5 ದಿನಗಳ ಕಾಲ ಆರೋಪಿ ರಾಜೇಶ್ ನನ್ನು ದೆಹಲಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಆರೋಪಿ ರಾಜೇಶ್ ನಿನ್ನೆ ಅರ್ಜಿದಾರರ ಸೋಗಿನಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಭೇಟಿಯಾಗಲು ಬಂದಿದ್ದ. ಈ ವೇಳೆ ಏಕಾಏಕಿ ದಾಳಿ ನಡೆಸಿ ಹಲ್ಲೆ ನಡೆಸಿದ್ದಾನೆ. ತಡೆಯಲು ಮುಂದಾದ ಭದ್ರತಾ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read