ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸಿಎಂ ರೇಖಾ ಗುಪ್ತಾ ಅಧಿಕೃತ ನಿವಾಸದಲ್ಲಿ ನಡೆಯುತ್ತಿರುವ ಜನ್ ಸುನ್ ವಾಯಿ ಕಾರ್ಯಕ್ರಮ ನಡೆಸುತ್ತಿದ್ದರು. ಈ ಕ್ರಾರ್ಯಕ್ರಮದ ವೇಳೆ ಸಿಎಂ ರೇಖಾ ಗುಪ್ತಾ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಏಕಾಏಕಿ ಸಿಎಂ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೂ ಮೊದಲು ಕಾಗದ ಪತ್ರಗಳನ್ನು ನೀಡಿದ್ದಾನೆ. ಬಳಿಕ ಕೂದಲು ಎಳೆದು ಹಲ್ಲೆಗೆ ಯತ್ನಿಸಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಸಿಎಂ ರೇಖಾ ಗುಪ್ತಾರನ್ನು ರಕ್ಷಿಸಿದ್ದು, ದಾಳಿಕೋರನನ್ನು ಪೊಲೀಸರು ಬಂಧಿಸಿದ್ದಾರೆ.
ಸಿಎಂ ರೇಖಾ ಗುಪ್ತಾರ ಮೇಲಿನ ಹಲ್ಲೆಯನ್ನು ಬಿಜೆಪಿ ದೆಹಲಿ ಘಟಕ ತೀವ್ರವಾಗಿ ಖಂಡಿಸಿದೆ. ಸದ್ಯ ಹಲ್ಲೆ ನಡೆಸಿರುವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.