HomeIndiaBREAKING NEWS: ದೆಹಲಿ ಚುನಾವಣೆ: ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರಿಗೆ ಹಿನ್ನಡೆ |Delhi Assembly...

BREAKING NEWS: ದೆಹಲಿ ಚುನಾವಣೆ: ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರಿಗೆ ಹಿನ್ನಡೆ |Delhi Assembly Election Result

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಬಿಜೆಪಿ ಮ್ಯಾಜಿಕ್ ಸಂಖ್ಯೆ ದಾಟಿದ್ದು, ಮುನ್ನಡೆ ಕಾಯ್ದುಕೊಂಡಿದೆ.

ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ.

ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಪ್ 27 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 42 ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಈ ಮೂಲಕ ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ವಿಶೇಷವೆಂದರೆ ಮುಸ್ಲಿಂ ಪ್ರಾಬಲವಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular