HomeIndiaBIG NEWS: ದೆಹಲಿ ಫಲಿತಾಂಶ ತುಷ್ಟೀಕರಣ ರಾಜಕೀಯ ತಿರಸ್ಕಾರಕ್ಕೆ ಉದಾಹರಣೆ: ಬಿಜೆಪಿ ದೂರದೃಷ್ಟಿ ನಾಯಕತ್ವಕ್ಕೆ ಸಿಕ್ಕ...

BIG NEWS: ದೆಹಲಿ ಫಲಿತಾಂಶ ತುಷ್ಟೀಕರಣ ರಾಜಕೀಯ ತಿರಸ್ಕಾರಕ್ಕೆ ಉದಾಹರಣೆ: ಬಿಜೆಪಿ ದೂರದೃಷ್ಟಿ ನಾಯಕತ್ವಕ್ಕೆ ಸಿಕ್ಕ ಗೆಲುವು: HDK

ನವದೆಹಲಿ: ದೆಹಲಿಯ ವಿಧಾನಸಭೆ ಚುನಾವಣೆಯ ಫಲಿತಾಂಶ ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದಿದ್ದಾರೆ.

ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular