ಬಜೆಟ್ ಹೊತ್ತಲ್ಲೇ ಹಣಕಾಸು ಸಚಿವಾಲಯದ ಸೂಕ್ಷ್ಮ ಮಾಹಿತಿ ಸೋರಿಕೆ: ಅರೆಸ್ಟ್

ನವದೆಹಲಿ: ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡುವ ಬೇಹುಗಾರಿಕೆ ಜಾಲವನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬುಧವಾರ ಪತ್ತೆ ಹಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುತ್ತಿಗೆ ಉದ್ಯೋಗಿ ಸುಮಿತ್, ಡೇಟಾ ಎಂಟ್ರಿ ಆಪರೇಟರ್ ಹಣದ ಬದಲಿಗೆ ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಮತ್ತು ವಿದೇಶಗಳಿಗೆ ವರ್ಗೀಕೃತ ಡೇಟಾವನ್ನು ಒದಗಿಸಿದ್ದು, ಆತನನ್ನು ಬಂಧಿಸಲಾಗಿದೆ. ಆರೋಪಿಯು ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳಲು ಬಳಸುತ್ತಿದ್ದ ಒಂದು ಮೊಬೈಲ್ ಫೋನ್ ಅನ್ನು ಆತನ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ.ಅಧಿಕೃತ ರಹಸ್ಯ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಹಣಕಾಸು ಸಚಿವಾಲಯವು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023 ಅನ್ನು ಮಂಡಿಸಲು ಸಿದ್ಧವಾಗಿರುವ ಸಮದರ್ಭದಲ್ಲೇ ಇಂತಹ ಬೆಳವಣಿಗೆ ನಡೆದಿದೆ.

ಬಜೆಟ್‌ಗೆ ಸಂಬಂಧಿಸಿದ ಡೇಟಾದ ಸೋರಿಕೆ ಮಾರುಕಟ್ಟೆಯಲ್ಲಿ ದೊಡ್ಡ ಪ್ರಭಾವ ಬೀರಬಹುದು ಎಂದು ಹೇಳಲಾಗಿದ್ದು, ತನಿಖೆ ಮುಂದುವರೆದಿದೆ.

https://twitter.com/ANI/status/1615705497084264449

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read