HomeIndiaBIG NEWS: ದೆಹಲಿ ಡಿಸಿಎಂ ಬಂಧನ ಬಳಿಕ ಸಿಎಂ ಕೇಜ್ರಿವಾಲ್ ಗೆ ಬಿಗ್ ಶಾಕ್: ವಿಚಾರಣೆಗೆ...

BIG NEWS: ದೆಹಲಿ ಡಿಸಿಎಂ ಬಂಧನ ಬಳಿಕ ಸಿಎಂ ಕೇಜ್ರಿವಾಲ್ ಗೆ ಬಿಗ್ ಶಾಕ್: ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಕೇಜ್ರಿವಾಲ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿತ್ತು. ಮದ್ಯ ಹಗರಣದಲ್ಲಿ ಭಾಗಿಯಾದವರೊಂದಿಗೆ ನಿಕಟ ಮತ್ತು ಸತತವಾಗಿ ಕೇಜ್ರಿವಾಲ್ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿತ್ತು.

ಅಬಕಾರಿ ಸಚಿವರಾಗಿದ್ದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿಯಲ್ಲಿ ಮದ್ಯದ ಅಂಗಡಿ ಲೈಸೆನ್ಸ್ ಗಳನ್ನು ತಮಗೆ ಬೇಕಾದವರಿಗೆ ಹಂಚಿಕೆ ಮಾಡಿದ್ದು, ಉದ್ಯಮಿಗಳಿಂದ 338 ಕೋಟಿ ರೂ. ಪಡೆದಿದ್ದಾರೆ ಎಂಬ ಆರೋಪವಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular