HomeIndiaBREAKING: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್…?

BREAKING: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್…?

ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ.

ಮನೀಶ್ ಸಿಸೋಡಿಯಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಪ್ ಆರೋಪಿಸಿದ್ದು, ಅವರನ್ನು ಬಂಧಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಳಿವು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಮುನ್ನ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. AAP ಮನೀಶ್ ಅವರ ಬಂಧನದ ಬಗ್ಗೆ ಆರೋಪಿಸಿದೆ.

ಮದ್ಯದ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದಿನ ಕೇಂದ್ರೀಯ ತನಿಖಾ ದಳ(ಸಿಬಿಐ) ವಿಚಾರಣೆಗೆ ಒಳಪಡಿಸುವ ಮೊದಲು, ಅವರ ಮನೆಯ ಹೊರಗೆ ನಾಲ್ಕು ಹಂತದ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಮತ್ತು ಕ್ಷಿಪ್ರ ಕಾರ್ಯಪಡೆ(ಆರ್‌ಎಫ್‌ಎ) ನಿಯೋಜಿಸುವ ಮೂಲಕ ಭದ್ರತೆ ಹೆಚ್ಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular