HomeLatest NewsBREAKING: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ಅವಘಡ: ನಾಲ್ವರು ಸಜೀವದಹನ

BREAKING: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ಅವಘಡ: ನಾಲ್ವರು ಸಜೀವದಹನ

ನವದೆಹಲಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಜೀವದಹನಗೊಂಡಿರುವ ಘಟನೆ ದೆಹಲಿಯ ರಿಥಲಾದಲ್ಲಿ ನಡೆದಿದೆ.

ಇಲ್ಲಿನ ರೋಹಿಣಿ ಸೆಕ್ಟರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಬೆಂಕಿಯ ಕೆನ್ನಾಲಿಗೆ ಕೆಲ ಸಮಯದಲ್ಲೇ ಇಡೀ ಫ್ಯಾಕ್ಟರಿ ಆವರಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 16 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular