HomeIndiaBREAKING NEWS: ದೆಹಲಿಯ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ

BREAKING NEWS: ದೆಹಲಿಯ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ

ನವದೆಹಲಿ: ಗುರುಗ್ರಾಮದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬೆನ್ನಲ್ಲೇ ದೆಹಲಿಯ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ದೆಹಲಿಯ ಅಲಿಪುರದಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 30ಕ್ಕೂ ಹೆಚ್ಚು ಅಗ್ನಿ ಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular