BIG NEWS: ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ; ಮೂವರು ಸಜೀವದಹನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 7 ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.

ದೆಹಲಿಯ ಕೃಷ್ಣನಗರ ಪ್ರದೇಶದಲ್ಲಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವದಹನಗೊಂಡಿದ್ದಾರೆ. ಬೆಳಗಿನ ಜಾವ 2;30ರ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಐದು ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

ಕಟ್ಟಡದಲ್ಲಿದ್ದ 13 ಜನರನ್ನು ರಕ್ಷಿಸಲಾಗಿದೆ. ಆದರೆ ಮೂವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಕಟ್ಟಡದ ಪಾರ್ಕಿಂಗ್ ನಲ್ಲಿ ಕಾಣಿಸಿಕೊಂಡ ಬೆಂಕಿ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read