HomeIndiaದೆಹಲಿಯಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: ಇಬ್ಬರು ಸಾವು; ಆರು ಜನರ ಸ್ಥಿತಿ ಗಂಭೀರ

ದೆಹಲಿಯಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: ಇಬ್ಬರು ಸಾವು; ಆರು ಜನರ ಸ್ಥಿತಿ ಗಂಭೀರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಜ್ಕರ ಬೆಣ್ಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿಯ ಸ್ವರೂಪ್ ನಗರದಲ್ಲಿರುವ ಕಾರ್ಖಾನೆಯೊಂದರಲ್ಲಿ ಈ ದುರಂತಸಂಭವಿಸಿದೆ. ಸ್ವರೂಪ್ ನಗರ ಪೊಲೀಸರ ಮಾಹಿತಿ ಪ್ರಕಾರ ಕಾರ್ಖಾನೆಯ ಗ್ರೌಂಡ್ ಫ್ಲೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದು ಮೊದಲ ಮಹಡಿಗೂ ವ್ಯಾಪಿಸಿದೆ. ಕೆಲ ಸಮಯದಲ್ಲೇ ಕಾರ್ಖಾನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಯತ್ನಸಿದ್ದಾರೆ. ಬೆಂಕಿ ಅವಘಡದಲ್ಲಿ ಯಾರೂ ಮೃಪಟ್ಟಿಲ್ಲ. ಆದರೆ ಅಕ್ಕಪಕ್ಕದ ನಿವಾಸಿಗಳು ಬೆಂಕಿ ಅವಘಡಕ್ಕೆ ಹೆದರಿ ಮನೆಗಳಿಂದ ಜಿಗಿಯುತ್ತಿದ್ದಂತೆ ಗಂಭೀರವಾಗಿ ಗಾಯಗೊಂಡು ದುರಂತಕ್ಕೀಡಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆ ಕಾರ್ಖಾನೆಯ ಬಳಿಯ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದೆ. ಬೆಂಕಿ ಅವಘಡದಿಂದ ರಕ್ಷಿಸಿಕೊಳ್ಳಲು ಸ್ಥಳೀಯ ನಿವಾಸಿಗಳು ಮನೆಗಳಿಂದ ಕೆಳಗೆ ಹಾರಿದ್ದಾರೆ. ಹೀಗೆ ಹಾರಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಜನರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಓರ್ವ 30 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಇನ್ನೋರ್ವಾ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಿಯಮ ಉಲ್ಲಂಘಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ: 22 ಬಿಜೆಪಿ ನಾಯಕರ ವಿರುದ್ಧ FIR ದಾಖಲು

ಬಳ್ಳಾರಿ: ವಿಪಕ್ಷ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಎಪ್ಐಆರ್ ದಾಖಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಸೆಪ್ಟೆಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ಸಂಚಾರ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 22 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಮ್ಮರಚೇಡು ಗ್ರಾಮದಿಂದ ಬಳ್ಳಾರಿ ನಗರದವರೆಗೆ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಸೆಪ್ಟೆಂಬರ್ 9 ರಂದು ಬಳ್ಳಾರಿ ನಗರವನ್ನು ತಲುಪಿ ಸಮಾರೋಪ ಗೊಂಡಿತ್ತು. ಪಾದಯಾತ್ರೆಯ ಮಾರ್ಗದುದ್ದಕ್ಕೂ ಪೂರ್ವಾನುಮತಿಯಿಲ್ಲದೆ ಬಿಜೆಪಿ ಬಾವುಟ ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಬಿಐಟಿಎಂ ಕಾಲೇಜುವರೆಗೆ ಮಾತ್ರ ಬಾವುಟ ಅಳವಡಿಕೆಗೆ ಅವಕಾಶ ನೀಡಿದ್ದ ಬಳ್ಳಾರಿ ಜಿಲ್ಲಾಧಿಕಾರಿಗಳು, ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸದಂತೆ ನಿಷೇಧಾಜ್ಞೆ ಹೊರಡಿಸಿದ್ದರು.

ಬಿಜೆಪಿ ಸಮಾರೋಪ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿಯೇ ನಿಯಮ ಮೀರಿ ಅಳವಡಿಸಲಾಗಿದ್ದ ಬ್ಯಾನರ್ ಮತ್ತು ಬಾವುಟಗಳನ್ನು ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದು ಬಿಜೆಪಿ ನಾಯಕರ ಮತ್ತು ಆಡಳಿತ ಯಂತ್ರದ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.

ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಆಕ್ರೋಶಗೊಂಡ ಬಿಜೆಪಿ ನಾಯಕರು, ಸೆಪ್ಟೆಂಬರ್ 9 ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ರಸ್ತೆ ತಡೆದು ಧರಣಿ ನಡೆಸಿದ್ದರು. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಸೋಮಶೇಖರ್ ರೆಡ್ಡಿ, ಎಂಪಿ.ರೇಣುಕಾಚಾರ್ಯ ಸೇರಿ 22 ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular