HomeLatest NewsBIG NEWS: ದಟ್ಟ ಮಂಜು ಕವಿದ ವಾತಾವರಣ: 118 ವಿಮಾನಗಳ ಹಾರಾಟ ರದ್ದು

BIG NEWS: ದಟ್ಟ ಮಂಜು ಕವಿದ ವಾತಾವರಣ: 118 ವಿಮಾನಗಳ ಹಾರಾಟ ರದ್ದು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು, ಮೋಡಕವಿದ ವಾತಾವರಣ ಹಿನ್ನೆಲೆಯಲ್ಲಿ ವಿಮಾನಗಾಳ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ.

ದೆಹಲಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಹಿನ್ನೆಲೆಯಲ್ಲಿ ಗೋಚರತೆ ಸ್ಪಷ್ಟವಾಗಿಲ್ಲ. ಈ ಹಿನ್ನೆಲೆಯಲ್ಲಿ 118 ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. 16 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ.

ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 1300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ದಟ್ಟ ಮಂಜು, ಕಡಿಮೆ ಗೋಚರತೆಯಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿಮಾಅನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular