HomeIndiaಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ: ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: 15 ವಿಮಾನಗಳ ಮಾರ್ಗ...

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ: ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: 15 ವಿಮಾನಗಳ ಮಾರ್ಗ ಬದಲು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.

ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಹಾಗೂ ದೆಹಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳು ವಿಳಂಬಗೊಂಡಿದ್ದು, ಒಟ್ಟು 15 ವಿಮಾನಗಳ ಮಾರ್ಗ ಬದಲಾವಣೆಯಾಗಿದೆ.

ವಿಮಾನಗಳ ಪೈಕಿ ಮೂರು ಅಂತಾರಾಷ್ಟ್ರೀಯ ವಿಮಾನಗಳು ಸೇರಿವೆ. ಒಟ್ಟು 15 ವಿಮಾನಗಳಲ್ಲಿ 12 ವಿಮಾನಗಳನ್ನು ಜೈಪುರಕ್ಕೆ, ಎರಡು ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ ಒಂದು ವಿಮಾನವನ್ನು ಲಕ್ನೋಗೆ ತಿರುಗಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಮಾನ ಹಾರಾಅತ, ರೈಲು ಸಂಚಾರಗಳಲ್ಲಿ ವ್ಯತ್ಯಯವಾಗಿವೆ.

ಹವಾಮಾನ ವೈಪರೀತ್ಯದಿಂದ ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸುವಂತೆ ವಿಮಾನಯಾನ ಸಂಸ್ಥೆಗಳು ಮನವಿ ಮಾಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular