ದೆಹಲಿ ಕರ್ನಾಟಕ ಭವನದ ರಾಜ್ಯದ ನೌಕರ ಆತ್ಮಹತ್ಯೆ

ವಿಜಯನಗರ: ದೆಹಲಿ ಕರ್ನಾಟಕ ಭವನದಲ್ಲಿ ನೌಕರನಾಗಿದ್ದ ವಿಜಯನಗರ ಮೂಲದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

35 ವರ್ಷದ ಮಾರುತಿ ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದವರು.

ಎರಡು ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಮಾರುತಿ, ಪತ್ನಿ ಹಾಗೂ ಮಕ್ಕಳನ್ನು ತವರು ಮನೆಗೆ ಬಿಟ್ಟುಬಂದಿದ್ದ. ತಂದೆ-ತಾಯಿ ನೋಡಿಕೊಂಡು ಬರುತ್ತೇನೆ ಎಂದು ಅಯ್ಯನಹಳ್ಳಿಗೆ ಬಂದಿದ್ದರು. ಮನೆಗೆ ಬಂದ ಮಾರುತಿ ಕಾನಾಹೊಸಳ್ಳಿ ಹೊರವಲಯದಲ್ಲಿ ಹುಣಸೆಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾರುತಿ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಮಾರುತಿ ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಾನಾಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read