HomeIndiaBREAKING NEWS: UAPA ಅಡಿಯಲ್ಲಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು...

BREAKING NEWS: UAPA ಅಡಿಯಲ್ಲಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ

ನವದೆಹಲಿ: UAPA ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ LG ಅನುಮೋದಿಸಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು 2010 ರಲ್ಲಿ ಕಾರ್ಯಕ್ರಮವೊಂದರಲ್ಲಿ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಶುಕ್ರವಾರ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಕ್ಟೋಬರ್ 21, 2010 ರಂದು ‘ಆಜಾದಿ-ದಿ ಓನ್ಲಿ ವೇ’ ಬ್ಯಾನರ್ ಅಡಿಯಲ್ಲಿ ರಾಜಕೀಯ ಕೈದಿಗಳ ಬಿಡುಗಡೆಗಾಗಿ ಸಮಿತಿಯು ಸಮ್ಮೇಳನವನ್ನು ಆಯೋಜಿಸಿತ್ತು. ಬೂಕರ್ ಪ್ರಶಸ್ತಿ ವಿಜೇತ ಲೇಖಕರು ಸಮಾರಂಭದಲ್ಲಿ ಭಾಷಣಕಾರರಲ್ಲಿ ಒಬ್ಬರಾಗಿದ್ದರು. ರಾಯ್ ಮತ್ತು ಇತರ ಭಾಷಣಕಾರರು ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular