HomeIndiaBIG NEWS: ಹೆದ್ದಾರಿಯಲ್ಲಿ ಮಹಿಳೆಯ ಮೃತದೇಹವಿರುವ ಸೂಟ್ ಕೇಸ್ ಪತ್ತೆ

BIG NEWS: ಹೆದ್ದಾರಿಯಲ್ಲಿ ಮಹಿಳೆಯ ಮೃತದೇಹವಿರುವ ಸೂಟ್ ಕೇಸ್ ಪತ್ತೆ

ಲಖನೌ: ದೆಹಲಿ-ಲಖನೌ ಹೆದ್ದಾರಿಯಲ್ಲಿ ಮಹಿಳೆಯೊಬ್ಬರ ಮೃತದೇಹವಿರಿಸಿದ್ದ ಸೂಟ್ ಕೇಸ್ ವೊಂದು ಪತ್ತೆಯಾಗಿದೆ. ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ದೆಹಲಿ-ಲಖನೌ ಹೆದ್ದಾರಿಯಲ್ಲಿ ಕೆಂಪುಬಣ್ಣದ ಸೂಟ್ ಕೇಸ್ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಸೂಟ್ ಕೇಸ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಸುಮಾರು 25ರಿಂದ 30 ವರ್ಷದವರಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮಹಿಳೆಯ ಮೃತದೇಹದ ಮೇಲೆ ಅಲ್ಲಲ್ಲಿ ಗಾಯದ ಗುರುತುಗಳಿವೆ. ಮೃತದೇಹದ ಜೊತೆಗೆ ಸೂಟ್ ಕೇಸ್ ನಲ್ಲಿ ಬಟ್ಟೆಗಳಿವೆ. ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ಕ್ಯಾಮರಾ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶುಕ್ರವಾರ ಮಹಿಳೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಎ ಎಪಿ ವಿನೀತ್ ಭಟ್ನಾಗರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular