
ದಿನಸಿ ಅಂಗಡಿ ನಡೆಸುತ್ತಿದ್ದ ಅಜಯ್ ಗುಪ್ತಾ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದ್ದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಮಾಡಿದ ಕಾರನ್ನು 28 ವರ್ಷದ ಮಹಿಳೆ ಚಲಾಯಿಸುತ್ತಿದ್ದರು. ವೃತ್ತಿಯಲ್ಲಿ ವಾಸ್ತುಶಿಲ್ಪಿಯಾಗಿರುವ ಅಶೋಕ್ ವಿಹಾರ್ ನಿವಾಸಿ ಮಹಿಳೆಯು ಮೊದಲು ಜನರೇಟರ್‌ಗೆ ಡಿಕ್ಕಿ ಹೊಡೆದು ನಂತರ ಅಜಯ್ ಗುಪ್ತಾ ಅವರ ಮೇಲೆ ಕಾರನ್ನ ಓಡಿಸಿದರೆಂದು ಆರೋಪಿಸಲಾಗಿದೆ.
ಆಕೆ ಗ್ರೇಟರ್ ಕೈಲಾಶ್‌ನಲ್ಲಿ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಬಂಧಿಸಲಾಗಿದೆ.
ಮಹಿಳೆ ಪಾರ್ಟಿಯಿಂದ ಮನೆಗೆ ಹಿಂದಿರುಗುತ್ತಿದ್ದರೆ, ಮೃತ ವ್ಯಕ್ತಿ ಆಸ್ಪತ್ರೆಯಿಂದ ಔಷಧಿಗಳನ್ನು ಖರೀದಿಸಿ ಮನೆಗೆ ಹೋಗುತ್ತಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.

