HomeIndiaBREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದ್ದು, ರೈಲಿನ ಇತರ ವಿಭಾಗಗಳನ್ನು ಲಗೇಜ್ ವಿಭಾಗದಿಂದ ಬೇರ್ಪಡಿಸಲಾಗಿದೆ. ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಇತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ಬಳಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ(DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಸಾವು ನೋವುಗಳ ವರದಿಗಳು ಇಲ್ಲಿಯವರೆಗೆ ಬಂದಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ದಳದ ತಂಡ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular