HomeIndiaಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ. ಕೂಡಲೇ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 22ರಂದು ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದ್ದು, ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ಸಮ್ಮತಿ ಸೂಚಿಸಿದ್ದಾರೆ. ಮೇ 22ರಂದು ಮೇಯರ್ ಆಯ್ಕೆಯಾಗಲಿದ್ದು, ನಂತರ ಮೇಯರ್ ಅವರಿಂದಲೇ ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಮೂರ್ನಾಲ್ಕು ಬಾರಿ ಮೇಯರ್ ಆಯ್ಕೆ ಮುಂದೂಡಲಾಗಿತ್ತು. ನಾಮನಿರ್ದೇಶಿತರಿಗೆ ಮತದಾನ ಹಕ್ಕು ವಿಚಾರವಾಗಿ ಗೊಂದಲ ಉಂಟಾಗಿತ್ತು. ಸುಪ್ರೀಂಕೋರ್ಟ್ ಆದೇಶ ನೀಡಿ ನಾಮನಿರ್ದೇಶಕ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular