BIG NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 6 ಜನರು ದುರ್ಮರಣ

ನವದೆಹಲಿ: ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯಲ್ಲಿ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 6 ಜನರು ಸ್ವಚ್ಛತಾ ಸಿಬ್ಬಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಎಕ್ಸ್ ಪ್ರೆಸ್ ವೇ ಒಂದು ಭಾಗವನ್ನು ಸ್ವಚ್ಚಗೊಳಿಸುತ್ತಿದ್ದ ವೇಳೆ ಪಿಕಪ್ ವಾಹನವೊಂದು ವೇಗವಾಗಿ ಬಂದು ಡಿಕ್ಕಿಹೊಡೆದಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹರಿಯಾಣದ ಫಿರೋಜ್ ಪುರ್ ಝಿರ್ಕಾರದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಪಿಕಪ್ ವಾಹನ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಮೃತರು 6 ಜನ ಮಹಿಳೆಯರಾಗಿದ್ದಾರೆ. ಗಾಯಾಳು ಸಿಬ್ಬಂದಿಗಳನ್ನು ಮಂಡಿ ಖೇರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read