ನವದೆಹಲಿ: ನೈಋತ್ಯ ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿದು ಬಿದ್ದು ದುರಂತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಹಲವು ವಿದ್ಯಾರ್ಥಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನೈಋತ್ಯ ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯಲ್ಲಿ ಈ ಘಟನೆ ನಡೆದಿದೆ. ದೆಹಲಿ ವಿವಿ ಸೌತ್ ಕ್ಯಾಂಪಸ್ ಸಮೀಪದ ಪಿಜಿ ಇದಾಗಿದ್ದು, ಇಂದು ಮಧ್ಯಾಹ್ನ ಪಿಜಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಿ ಹೊರತೆಗೆಯಲಾಗಿದೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ.
NSUI, AISA ವಿದ್ಯಾರ್ಥಿ ಸಂಘಟನೆಗಳಿಂದ ರಕ್ಷಣ ಅಕಾರ್ಯಾಚರಣೆ ನಡೆಯುತ್ತಿದೆ. 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದಾರೆ. ರಕ್ಷಣಾ ತಂಡಗಳಿಂದ ರಕ್ಷಣಾಕಾರ್ಯಾಚರಣೆ ನಡೆಯುತ್ತಿದೆ.
ದೆಹಲಿ ವಿಶ್ವ ವಿದ್ಯಾಲಯ ಬಳಿಯ ಪಿಜಿ ಕಟ್ಟಡ ಇದಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪಿಜಿಯಲ್ಲಿ ವಾಸವಾಗಿದ್ದರು ಎಂದು ತಿಳಿದುನಂದಿದೆ.
ಸದ್ಯದ ಮಾಹಿತಿ ಪ್ರಕಾರ ಈ ಪಿಜಿ ಕಟ್ಟಡ ಆನಂದ್ ಬನ್ಸಾಲ್ ಎಂಬುವವರಿಗೆ ಸೇರಿದ ಕಟ್ಟಡ ಎಂದು ತಿಳಿದುಬಂದಿದೆ. ಕಟ್ಟಡ ಕುಸಿದ ವೇಳೆ 50 ಯುವಕರು ಈ ಕಟ್ಟಡದಲ್ಲಿ ಇದ್ದರು. 70 ಹಾಸಿಗೆಗಳಿರುವ ಪಿಜಿ ಕಟ್ಟಡ ಇದಾಗಿದೆ.
ದುರಂತದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಳೆ ಕಟ್ಟಡವಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.