HomeIndiaBREAKING NEWS: ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಶೋಧ ಕಾರ್ಯ

BREAKING NEWS: ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಶೋಧ ಕಾರ್ಯ

ನವದೆಹಲಿ: ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ. ಅದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇರುವುದಾಗಿ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಶೋಧ ನಡೆಸಲಾಗುತ್ತಿದೆ. ಇಂದು ಸಂಜೆ 6.30ಕ್ಕೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಬೇಕಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಂಬ್ ಬೆದರಿಕೆಯ ಕುರಿತು ಕರೆ ಸ್ವೀಕರಿಸಿದ ವಿಮಾನಯಾನ ಅಧಿಕಾರಿಗಳು ಬೋರ್ಡಿಂಗ್ ಅನ್ನು ನಿಲ್ಲಿಸಿ ಬಾಂಬ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ವಿಮಾನವನ್ನು ಶೋಧಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular