ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಇದೀಗ ಇಂದು ಕೂಡ ಮತ್ತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ದ್ವಾರಕಾ ಡಿಪಿಆರ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳನ್ನು ಶಾಲೆಯಿಂದ ಹೊರಕಳುಹಿಸಿ ಪರಿಶೀಲನೆ ನಡೆಸಿದ್ದಾರೆ.
ಡಿಪಿಆರ್ ದ್ವಾರಕಾ, ನಜಾಫ್ ಗಢ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.