HomeIndiaಪಟಾಕಿ ಹಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಸಾವು

ಪಟಾಕಿ ಹಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಸಾವು

ನವದೆಹಲಿ: ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ದೆಹಲಿಯ ಶಹದಾರ ಪ್ರದೇಶದ ಫಾರ್ಶ್ ಬಜಾರ್ ನಲ್ಲಿ ನಡೆದಿದೆ.

ಪಟಾಕಿ ಹೊಡೆಯುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟು ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಆಕಾಶ್ ಶರ್ಮಾ (44) ಹಾಗೂ ಆತನ ಸಹೋದರ ರಿಷಬ್ ಶರ್ಮಾ (16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತ ಆಕಾಶ್ ಶರ್ಮಾ ಮಗ ಕ್ರಿಶ್ ಶರ್ಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ನಿನ್ನೆ ರಾತ್ರಿ ಮನೆಯ ಮುಂದೆ ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ 5 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಆಕಾಶ್ ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬರಿಂದ 70 ಸಾವಿರ ರೂಪಾಯಿ ಸಾಲ ಪಡೆದಿದ್ದರು. ತಿಂಗಳು ಕಳೆದರೂ ಹಣ ಹಿಂತಿರುಗಿಸಿಲ್ಲ ಅಲ್ಲದೇ ಫೋನ್ ಕೂಡ ಸ್ವೀಕರಿಸುತ್ತಿರಲಿಲ್ಲ. ಇದೇ ಕಾರಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular