Triple Murder: ಹಣದ ತೊಂದರೆ ಇದ್ದ ವ್ಯಕ್ತಿಯಿಂದ ಘೋರ ಕೃತ್ಯ: ಪತ್ನಿ, ಇಬ್ಬರು ಪುತ್ರರ ಕೊಂದು ಆತ್ಮಹತ್ಯೆ ಯತ್ನ

ನವದೆಹಲಿ: ರಾಷ್ಟ್ರ ರಾಜಧಾನಿಯ ಮೋಹನ್ ಗಾರ್ಡನ್ ಏರಿಯಾದಲ್ಲಿ ನಡೆದ ಘಟನೆಯೊಂದರಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಪಿನ್ ಗಾರ್ಡನ್ ನಿವಾಸಿ ರಾಜೇಶ್(38) ತನ್ನ 35 ವರ್ಷದ ಪತ್ನಿ ಸುನಿತಾ ಮತ್ತು ಐದು ವರ್ಷ, ನಾಲ್ಕು ತಿಂಗಳ ವಯಸ್ಸಿನ ಇಬ್ಬರು ಗಂಡು ಮಕ್ಕಳನ್ನು ಕೊಂದಿದ್ದಾನೆ. ಪತ್ನಿ ಮತ್ತು ಪುತ್ರರನ್ನು ಕೊಂದ ಬಳಿಕ ರಾಜೇಶ್ ತನ್ನ ಮಣಿಕಟ್ಟಿನ ಮೇಲೆ ಆಳವಾದ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಭಾನುವಾರ ಮುಂಜಾನೆ ತನ್ನ ಸ್ನೇಹಿತರಿಗೆ ತನ್ನ ಆರ್ಥಿಕ ಸಂಕಷ್ಟದ ಬಗ್ಗೆ ಸಂದೇಶ ಕಳುಹಿಸಿದ್ದ. ಆತನ ಸ್ನೇಹಿತರು ಆತನ ಸಹೋದರನನ್ನು ಎಚ್ಚರಿಸಿದರು. ಅವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಉಪ ಪೊಲೀಸ್ ಆಯುಕ್ತ(ದ್ವಾರಕಾ) ಎಂ. ಹರ್ಷವರ್ಧನ್ ತಿಳಿಸಿದ್ದಾರೆ.

ಘಟನೆ ನಡೆದಾಗ ವ್ಯಕ್ತಿಯ ಪೋಷಕರು ಮತ್ತೊಂದು ಕೋಣೆಯಲ್ಲಿದ್ದರು. ರಾಜೇಶ್ ಜನರಲ್ ಸ್ಟೋರ್ ನಡೆಸುತ್ತಿದ್ದಾರೆ. ಮೋಹನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಘಟನೆಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಆಸ್ತಿಗಾಗಿ ಬೇಡಿಕೆಯಿಟ್ಟಿದ್ದು, ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಆತನ ಸಂಬಂಧಿಕರು ಆರೋಪಿಸಿದ್ದಾರೆ. ರಾಜೇಶ್ ಆಸ್ತಿಗಾಗಿ ಬೇಡಿಕೆ ಇಟ್ಟಿದ್ದೇ ಕೊಲೆಗೆ ಕಾರಣ ಎಂದು ಸುನೀತಾ ಕುಟುಂಬ ಆರೋಪಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read