HomeLatest Newsದೆಹಲಿ ವಿಶ್ವವಿದ್ಯಾಲಯದ ಸಾಹಾಯಕ ಪ್ರಾಧ್ಯಾಪಕಿ ಬರ್ಬರ ಹತ್ಯೆ: ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ

ದೆಹಲಿ ವಿಶ್ವವಿದ್ಯಾಲಯದ ಸಾಹಾಯಕ ಪ್ರಾಧ್ಯಾಪಕಿ ಬರ್ಬರ ಹತ್ಯೆ: ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರನ್ನು ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಿಕೆ ಬಂದಿದೆ.

ದೇವಸ್ಮಿತಾ ಪೌಲ್‌ ಕೊಲೆಯಾದ ದುರ್ದೈವಿ. ಇವರು ದೆಹಲಿಯ ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಸ್ಮಿತಾ ಅವರ ಪತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ ಎನ್ನಲಾಗಿದೆ. ದೇವಸ್ಮಿತಾ ಪೌಲ್‌ ಸಾವಿನ ಬಗ್ಗೆ ಅವರ ಸಹೋದರಿ ದೇವಾರತಿ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ ಮಾಹಿತಿ ನೀಡಿದ್ದಾರೆ.

ಮುಂಜಾನೆಯಿಂದ ಫ್ಲಾಟ್ ಹೊರಗಿನಿಂದ ಲಾಕ್ ಆಗಿತ್ತು. ಆಗ ದೇವಸ್ಮಿತಾಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡು ಫ್ಲಾಟ್ ಬೀಗ ಮುರಿದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ದೇವಸ್ಮಿತಾ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಗಂಭೀರ ಗಾಯವಾಗಿದೆ. ಅವರ ಮಣಿಕಟ್ಟಿನ ನರಗಳನ್ನು ಕೂಡ ಕತ್ತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಮಿತಾ ಅವರದ್ದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಾರಣ ಅವರ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣ ಸೇರಿದಂತೆ ಯಾವುದೇ ಇನ್ನಿತರ ವಸ್ತುಗಳು ಕಳುವಾಗಿಲ್ಲ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular