ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ, ಡಿಸಿಎಂ ನಾಳಿನ ದೆಹಲಿ ಭೇಟಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿದೆ.

ಇದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಸಿಎಂ, ಡಿಸಿಎಂ ದೆಹಲಿಗೆ ತೆರಳಲಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಎಐಸಿಸಿ ನಾಯಕರೊಂದಿಗೆ ಸಭೆ ನಿಗದಿಯಾಗಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಬಾಕಿ ಉಳಿದ ಯೋಜನೆಗಳ ಬಗ್ಗೆ ಕೇಂದ್ರದ ನಾಯಕರೊಂದಿಗೆ ಚರ್ಚೆ ಉದ್ದೇಶದಿಂದ ಉಭಯ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಹಗರಣ ಅಥವಾ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ವಿಚಾರಕ್ಕಾಗಿ ಅಲ್ಲ. ಈ ಭೇಟಿ ಪೂರ್ವ ಯೋಜಿತವಾಗಿದೆ ಎಂದು ಹೇಳಲಾಗಿದೆ.

ಸಿಎಂ ಮತ್ತು ಡಿಸಿಎಂ ದೆಹಲಿ ಭೇಟಿಯ ವೇಳೆ ಕೇಂದ್ರದ ಜಲ ಶಕ್ತಿ ಸಚಿವರನ್ನು ಕೂಡ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಪಕ್ಷದ ವರಿಷ್ಠ ನಾಯಕರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ಬಗ್ಗೆಯೂ ವರಿಷ್ಠರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read