ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು; RPF ಸಿಬ್ಬಂದಿ ನೆರವಿನಿಂದ ʼಸುಖ ಪ್ರಸವʼ | Video

ದೆಹಲಿ: ಫೆಬ್ರವರಿ 6 ರಂದು ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲಿನಲ್ಲೇ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಹೆರಿಗೆಗೆ ಸಹಾಯ ಮಾಡಿದ್ದಾರೆ.

ಸಹರ್ಸಾಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ RPF ಸಿಬ್ಬಂದಿ, ಮಹಿಳಾ ಉಪ-ನಿರೀಕ್ಷಕರು ಮತ್ತು ಸಿಬ್ಬಂದಿ ಇತರ ಪ್ರಯಾಣಿಕರ ಸಹಾಯದಿಂದ ರೈಲಿನಲ್ಲೇ ಹೆರಿಗೆ ಮಾಡಿಸಿದ್ದಾರೆಂದು RPF ಇನ್ಸ್‌ಪೆಕ್ಟರ್ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ನಂತರ ತಾಯಿ ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಸಕಾಲದಲ್ಲಿ RPF ಸಿಬ್ಬಂದಿ ನೆರವಿಗೆ ಬಂದಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read