BREAKING NEWS: ನಿರ್ಮಾಣ ಹಂತದ ಕಟ್ಟಡ ಕುಸಿತ; ಮಹಿಳೆ ಸಾವು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತವಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಉತ್ತರ ದ್ವಾರಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯೊಂದರ ನಿರ್ಮಾಣ ಹಂತದ ಕಟ್ಟಡ ಕುಸಿತದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಉತ್ತರ ದ್ವಾರಕಾದ ಸೆಕ್ಟರ್ ಹನ್ನೆರಡರ ಬಳಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು, ಏಕಾಏಕಿ ಕುಸಿದ ಪರಿಣಾಮ 30 ವರ್ಷದ ದೇವಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದು ಅವರುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read