ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ದೆಹಲಿಯ ವಿಕಾಸ್ ಮಾರ್ಗದಲ್ಲಿರುವ ಸಚಿವಾಲಯದ ಕಟ್ಟಡದ ಎರಡನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ದಟ್ಟ ಹೊಗೆಯೊಂದಿಗೆ ಧಗಧಗನೆ ಹೊತ್ತಿ ಉರಿದಿದೆ.
ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದ್ದು, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಬೆಂಕಿ ಅವಘಡದಲ್ಲಿ ಯಾವುದೇ ಸಂಭಾವ್ಯ ಹಾನಿಯ ಕುರಿತು ವರಿಯಾಗಿಲ್ಲ. ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

