HomeIndiaBIG NEWS: ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ: ಗುಡಿಸಲುಗಳಿಗೂ ವ್ಯಾಪಿಸಿ ದುರಂತ: ಮಗು ಸೇರಿ ಮೂವರು...

BIG NEWS: ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ: ಗುಡಿಸಲುಗಳಿಗೂ ವ್ಯಾಪಿಸಿ ದುರಂತ: ಮಗು ಸೇರಿ ಮೂವರು ಸಜೀವದಹನ

ನವದೆಹಲಿ: ಗೋದಾಮಿನಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದ್ದು, ಮಗು ಸೇರಿ ಮೂವರು ಸಜೀವದಹನಗೊಂಡಿರುವ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳಿಗೂ ಬೆಂಕಿ ಆವರಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು ಮತ್ತು ಅದರ ಪಕ್ಕದಲ್ಲೇ ಕಾರ್ಮಿಕರು ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು. ಬೆಳಗಿನ ಜಾವ ಸುಮಾರು 1.25 ರ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿಗೆ ತಗುಲಿದ ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿಕೊಂಡಿವೆ.

ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಈ ಪ್ರದೇಶದ ರಸ್ತೆಗಳು ಅತ್ಯಂತ ಕಿರಿದಾಗಿದ್ದರಿಂದ ದೊಡ್ಡ ವಾಹನಗಳು ಘಟನಾ ಸ್ಥಳವನ್ನು ತಲುಪಲು ಹರಸಾಹಸ ಪಡಬೇಕಾಯಿತು.

ಅಗ್ನಿಶಾಮಕ ಅಧಿಕಾರಿ ಅಜಯ್ ಶರ್ಮಾ ನೇತೃತ್ವದಲ್ಲಿ ದೀರ್ಘಕಾಲದ ಕಾರ್ಯಾಚರಣೆಯ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ದುರದೃಷ್ಟವಶಾತ್, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವಷ್ಟರಲ್ಲೇ ಮೂವರು ಸಾವನ್ನಪ್ಪಿದ್ದರು.

ಸಾವನ್ನಪ್ಪಿದವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವಶೇಷಗಳಡಿಯಿಂದ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸದ್ಯ ಬೆಂಕಿ ಸಂಪೂರ್ಣ ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು (CATS) ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular