ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರೆಸ್ಟೋರೆಂಟ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡಲ್ಲಿ 21 ಜನರು ಸಜೀವದಹನಹೊಂಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿ ದುರಂತದ ಬಗ್ಗೆ ಪ್ರಧಾನಿ ನಏಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ಪ್ರಸಿದ್ದ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ವಿದೇಶಿ ಪ್ರಜೆಗಳು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
8 ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. 40ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಗಳು ಇನ್ನೂ ಮುಂದುವರೆದಿದೆ.
ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ದುರಂತ ಅತೀವ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಾಂತ್ವನ ನೀಳಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

