ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರೆಸ್ಟೋರೆಂಟ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ೨೧ ಜನರು ಸಜೀವದಹನಹೊಂಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ಪ್ರಸಿದ್ದ ಲೆಮನ್ ಗ್ರೀನ್ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ವಿದೇಶಿ ಪ್ರಜೆಗಳು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿ ದಕ್ಷಿಣ ವಿಭಾಗದ ಡಿಸಿಪಿ ಅನಂತ್ ಮಿತ್ತಲ್ ಪ್ರತಿಕ್ರಿಯಿಸಿ, ಇಂದು ಬೆಳಿಗ್ಗೆ 8:48ಕ್ಕೆ ಮಾಲ್ವಿಯಾ ನಗರದ ಫ್ಲೋರಿಶ್ ಸ್ಟೇ ಬಿ&ಬಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಬಂತು. ಸ್ಥಳೀಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
8 ಅಗ್ನಿಶಾಮಕ ದಳದವರ ಸಹಾಯದಿಂದ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಯಿತು. ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಇತರ ತುರ್ತು ಪ್ರತಿಕ್ರಿಯೆ ತಂಡಗಳ ಸಂಘಟಿತ ಪ್ರಯತ್ನಗಳಿಂದ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ದುರಂತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಮಾಳವೀಯ ನಗರದಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

