HomeLive Newsರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 2ರಷ್ಟು ಹೆಚ್ಚಳಕ್ಕೆ ಒತ್ತಾಯ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 2ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ(ಡಿಎ) ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರು ಕೂಡ ತುಟ್ಟಿ ಭತ್ಯೆ ಏರಿಕೆಗೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಈ ಕುರಿತಾಗಿ ಆರ್ಥಿಕ ಇಲಾಖೆ, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ನೌಕರರ ತುಟ್ಟಿ ಭತ್ಯೆ ಮಂಜೂರು ಮಾಡಿದೆ. ಕೇಂದ್ರ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಜನವರಿ 1, 2025ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇಕಡ 2ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2025ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇಕಡ 2ರಷ್ಟು ತುಟ್ಟಿ ಭತ್ಯೆಯನ್ನು ಮಂಜೂರು ಮಾಡಬೇಕೆಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular