ಕಾರವಾರ: ಖಾಸಗಿ ವಲಯದಲ್ಲಿ ದೈನಂದಿನ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ ಮಾಡುವ ಕುರಿತಾಗಿ ಕಂಪನಿಗಳು ಬೇಡಿಕೆ ಇಟ್ಟಲ್ಲಿ ಪರಿಶೀಲನೆ ನಡೆಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಕಾರವಾರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಏರಿಕೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲಸದ ಅವಧಿ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೆಲವು ಸಂಸ್ಥೆಗಳ ಮಾಲೀಕರು ಇದನ್ನು ಜಾರಿಗೊಳಿಸುವಂತೆ ಸಲಹೆ ನೀಡಿದ್ದಾರೆ. ಆದರೆ ಈ ಬಗ್ಗೆ ಕಾರ್ಮಿಕ ವಲಯದಿಂದ ಯಾರೂ ಪೂರಕವಾಗಿ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ಮುಖ್ಯಮಂತ್ರಿಗಳು, ಎಲ್ಲಾ ಸಚಿವರ ಜೊತೆಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.