HomeKarnatakaರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ: ಶಿಕ್ಷಣ ಸಚಿವರಿಗೆ ಖಾಸಗಿ ಶಾಲಾ...

ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ: ಶಿಕ್ಷಣ ಸಚಿವರಿಗೆ ಖಾಸಗಿ ಶಾಲಾ ಸಂಘಟನೆ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ತನ್ನ ವ್ಯಾಪ್ತಿಯ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆಗೆ ಐದು ಮತ್ತು ಎಂಟನೇ ತರಗತಿಯಲ್ಲಿ ಅನುತ್ತೀರ್ಣಕ್ಕೆ ಅವಕಾಶ ಕಲ್ಪಿಸುವ ನಿಯಮ ಜಾರಿಗೊಳಿಸಬೇಕೆಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್ ಆಗ್ರಹಿಸಿದೆ.

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಈ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಆರ್‌ಟಿಇ ಕಾಯ್ದೆ ತಿದ್ದುಪಡಿ 2019ರ ಅನುಷ್ಠಾನದ ಮೂಲಕ ಐದು ಮತ್ತು ಎಂಟನೇ ತರಗತಿ ವಾರ್ಷಿಕ ಪರೀಕ್ಷೆ, ನಂತರ ನಡೆಸುವ ಮರು ಪರೀಕ್ಷೆ ಎರಡರಲ್ಲಿಯೂ ಅನುತ್ತೀರ್ಣರಾಗುವ ಮಕ್ಕಳನ್ನು ಅದೇ ತರಗತಿಯಲ್ಲಿ ತಡೆಹಿಡಿಯಲು ನಿಯಮಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದಲ್ಲಿಯೂ ಇದನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಕ್ಕಳ ಕಲಿಕಾ ಗುಣಮಟ್ಟ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವುದು ಸಿಎಜಿ ವರದಿಯಲ್ಲಿಯೂ ಗೊತ್ತಾಗಿದೆ. ಎಂಟನೇ ತರಗತಿವರೆಗೆ ಯಾರನ್ನೂ ಅನುತ್ತೀರ್ಣಗೊಳಿಸದಂತೆ 9ನೇ ತರಗತಿಯಲ್ಲಿ ಅನುಕಂಪದಿಂದ ಪಾಸ್ ಮಾಡಲು, 10ನೇ ತರಗತಿಯಲ್ಲಿ ಫಲಿತಾಂಶ ಉತ್ತಮಪಡಿಸಲು ಶಿಕ್ಷಕರನ್ನು ಹಿಂಸೆ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅವರು, ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲಿಯೂ 5 ಮತ್ತು 8ನೇ ತರಗತಿಯ ಅನುತ್ತೀರ್ಣಕ್ಕೆ ಅವಕಾಶ ನೀಡುವ ನಿಯಮ ಅನುಷ್ಟಾನಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular