HomeKarnatakaಬಾಲ ಗಂಗಾಧರನಾಥ ಶ್ರೀಗೆ ಭಾರತ ರತ್ನ ನೀಡಲು ಒತ್ತಾಯ

ಬಾಲ ಗಂಗಾಧರನಾಥ ಶ್ರೀಗೆ ಭಾರತ ರತ್ನ ನೀಡಲು ಒತ್ತಾಯ

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶಾಸಕರಾದ ಶರತ್ ಬಚ್ಚೇಗೌಡ, ದಿನೇಶ್ ಗೂಳಿಗೌಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ, ಆರೋಗ್ಯ ತಲುಪಿಸಿದ ಶ್ರೀಗಳ ಸೇವೆಗೆ ಭಾರತ ರತ್ನ ಗೌರವ ಸಲ್ಲುವುದು ಸಮಸ್ತ ಕನ್ನಡಿಗರಿಗೆ ಸಲ್ಲುವ ಗೌರವವಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಬಾಲಗಂಗಾಧರನಾಥ ಶ್ರೀಗಳು ಆಧ್ಯಾತ್ಮಿಕ ಗುರುಗಳಷ್ಟೇ ಆಗಿರದೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕ್ರಿಯಾತ್ಮಕ ಕಾರ್ಯಗಳಿಂದ ಆದಿಚುಂಚನಗಿರಿಯನ್ನು ಚಿನ್ನದ ಗಿರಿಯಾಗಿ ಪರಿವರ್ತಿಸಿದ್ದಾರೆ. ಅವರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕೊಡುಗೆ ಪರಿಗಣಿಸಿ ಭಾರತರತ್ನ ನೀಡಬೇಕೆಂಬುದು ಮಠದ ಕೋಟ್ಯಂತರ ಭಕ್ತರು ಮತ್ತು ಕನ್ನಡಿಗರ ಆಶಯವಾಗಿದೆ. ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಬೇಡಿಕೆ ಬಗ್ಗೆ ಮನವರಿಕೆ ಮಾಡಿಕೊಟ್ಟು, ಭಾರತ ರತ್ನ ಪ್ರಶಸ್ತಿ ಘೋಷಣೆ ಆಗುವಂತೆ ಕ್ರಮ ವಹಿಸಬೇಕು. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular