HomeKarnatakaಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ : ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ “ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ”ದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದರು ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ ಎಂದರು.

ನರೇಂದ್ರ ಮೋದಿಯವರ ಮಂತ್ರಿಮಂಡಲದಲ್ಲಿ ಇದ್ದುಕೊಂಡೇ ಕೇಂದ್ರ ಸಚಿವ ಆಗಿದ್ದ ಅನಂತಕುಮಾರ ಹೆಗ್ಡೆ “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು” ಎಂದು ಘೋಷಿಸಿದರು. ಈ ಘೋಷಣೆಯನ್ನು ಪ್ರಧಾನಿ ಮೋದಿ  ಅವರಾಗಲೀ, ಅಮಿತ್‌ ಶಾ ಆಗಲೀ, ಬಿಜೆಪಿ  ಆಗಲೀ, RSS ಆಗಲಿ ಖಂಡಿಸಲಿಲ್ಲ, ವಿರೋಧಿಸಲಿಲ್ಲ. ಹೀಗಾಗಿ BJP ಮತ್ತು RSS ನ ಅಜೆಂಡಾವನ್ನು, ಉದ್ದೇಶವನ್ನು ಅನಂತಕುಮಾರ ಹೆಗ್ಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ಶೂದ್ರ, ದಲಿತ ಮತ್ತು ಶ್ರಮಿಕರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿತ್ತು ಎನ್ನುವುದನ್ನು ಎಲ್ಲರೂ ಒಮ್ಮೆ ಸ್ಮರಿಸಿಕೊಳ್ಳಬೇಕು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular