HomeKarnatakaBREAKING NEWS: ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ; 5 ವರ್ಷದ ಬಾಲಕಿ ಸಾವು

BREAKING NEWS: ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ; 5 ವರ್ಷದ ಬಾಲಕಿ ಸಾವು

ಧಾರವಾಡ: ರಾಜ್ಯದಲ್ಲಿ ಒಂದೆಡೆ ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

5 ವರ್ಷದ ಪೂರ್ಣಾ ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಬಾಲಕಿ ಪೂರ್ಣಾ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.

ಬಾಲಕಿಯನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.ಡೆಂಗ್ಯೂ ಸೋಂಕಿನಿಂದ ಬಾಲಕಿ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular