BIG NEWS: ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ

ಚಿಕ್ಕಮಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚಿಕ್ಕಮಕ್ಕಳು ಕೂಡ ಡೆಂಗ್ಯೂಗೆ ಬಲಿಯಾಗುತ್ತಿದ್ದಾರೆ. 6 ವರ್ಷದ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ 6 ವರ್ಷದ ಸಾನಿಯಾ ಮೃತ ಬಾಲಕಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ದು:ಖದ ನಡುವೆಯೂ ರಾಜ್ಯ ಸರ್ಕಾರಕ್ಕೆ ಬಾಲಕಿ ತಂದೆ ಮನವಿ ಮಾಡಿದ್ದು, ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಜನರು ಚಿಕಿತ್ಸೆಗೂ ಪರದಾಡುವ ಸ್ಥಿತಿ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಸೂಕ್ತ ಚಿಕಿತ್ಸೆ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು. ಆರೋಗ್ಯ ಇಲಾಖೆ ಇನ್ನಾದರೂ ಎಚ್ಚೆತ್ತು ಡೆಂಗ್ಯೂ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read