HomeKarnatakaBIG NEWS: ಡೆಂಗ್ಯೂ ಹರಡಲು ಕಾರಣರಾದವರಿಗೆ ಇನ್ಮುಂದೆ ಬೀಳಲಿದೆ ಭಾರಿ ದಂಡ: ಹೈಕೋರ್ಟ್ ಸೂಚನೆ

BIG NEWS: ಡೆಂಗ್ಯೂ ಹರಡಲು ಕಾರಣರಾದವರಿಗೆ ಇನ್ಮುಂದೆ ಬೀಳಲಿದೆ ಭಾರಿ ದಂಡ: ಹೈಕೋರ್ಟ್ ಸೂಚನೆ

ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ ಕರ್ತವ್ಯ ಎಂದು ಭಾವಿಸದೇ ಈ ರೋಗ ಹರಡುವುದಕ್ಕೆ ಕಾರಣರಾದ ವ್ಯಕ್ತಿಗಳು, ಸಂಘ ಸಂಸ್ಥೆಗಳು ಹಾಗೂ ವಸತಿ ಸಮುಚ್ಛಯಗಳಿಗೆ ಭಾರಿ ದಂಡ ವಿಧಿಸಬೇಕು. ಈ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆ ತರುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಡೆಂಗ್ಯೂ ಪ್ರಕರಣ ಹೆಚ್ಚ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular