HomeKarnatakaBREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ನಿವಾಸಿ ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಯುವತಿ ಬಳಲುತ್ತಿದ್ದಳು.

ಗೌರಿಬಿದನೂರಿನ ಖಾಸಗಿ ಆಸ್ಪತ್ರೆಗೆ ಯುವತಿಯನ್ನು ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular