ಡೆಂಗ್ಯೂ ಪ್ರಕರಣ ಹೆಚ್ಚಳವಾದರೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ತೋರುವ ಸಮಯವಿಲ್ಲ; ಸರ್ಕಾರಕ್ಕೆ ಹಗರಣವೇ ಮುಖ್ಯ ಹೊರತು ಜನರ ಜೀವವಲ್ಲ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಜನರ ಸಂಕಷ್ಟ ಆಲಿಸದ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಪ್ರತಿದಿನ ಸರಾಸರಿ 400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿದ್ದರೂ ನಾಡಿನ ಜನರ ಸಂಕಷ್ಟಕ್ಕೆ ಧಾವಿಸಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಈಜುಕೊಳದಲ್ಲಿ ಕಾಲಹರಣ ಮಾಡುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಸೇರಿದಂತೆ, ಎಲ್ಲ ಕಾಂಗ್ರೆಸ್ ನಾಯಕರು ಬಹುಕೋಟಿ ಹಗರಣಗಳಲ್ಲಿ ಸಿಲುಕಿರುವ ತಮ್ಮ ನಾಯಕರುಗಳನ್ನು ಶತಾಯಗತಾಯ ಸಂರಕ್ಷಿಸುವಲ್ಲಿ ನಿರತರಾಗಿದ್ದಾರೆ. ಹಾಗಾಗಿ ಅವರಿಗೆ ರಾಜ್ಯ ಜನರ ಆರೋಗ್ಯದ ಬಗ್ಗೆ ಕಾಳಜಿ ತೋರುವಷ್ಟು ಸಮಯವಿಲ್ಲ ಎಂದು ಕಿಡಿಕಾರಿದೆ.

ಕಾಂಗ್ರೆಸ್ ಗೆ ಹಗರಣ ಮುಖ್ಯ, ಹೊರತು ಜನರ ಜೀವವಲ್ಲ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read