BIG NEWS: ಡೆಂಗ್ಯೂ ಪ್ರಕರಣ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ನೀಡಿದ್ದಾರೆ. ಡಿಡಿಪಿಐ, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗೈಡ್ ಲೈನ್ಸ್:
ವಿದ್ಯಾರ್ಥಿಗಳು ಕೈ, ಕಾಲು ಮುಚ್ಚುವಂತಹ ಸಮವಸ್ತ್ರ ಧರಿಸಬೇಕು
ಶಾಲೆಗೆ ಬರುವ ಮುನ್ನ ಮಾಸ್ಕಿಟೋ ರಿಪೆಲೆಂಟ್ ಗಳನ್ನು ಕೈ, ಕಾಲುಗಳಿಗೆ ಹಚ್ಚಿಕೊಳ್ಳಬೇಕು
ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s & Don’t’s ಶಾಲೆಯ ಹಾಗೂ ಶಾಲಾ ಕೊಠಡಿಯ ನೋಟಿಸ್ ಬೋರ್ಡ್ ಗಳಲ್ಲಿ ಪ್ರದರ್ಶಿಸಬೇಕು
ಶುದ್ಧ ನೀರಿನ ಸಂಗ್ರಹಣ ಪರಿಕರಗಳನ್ನು ಭದ್ರವಾಗಿ ಮುಚ್ಚಿಡಬೇಕು. ಕಡ್ಡಾಯವಾಗಿ ವಾರಕ್ಕೊಮ್ಮೆ ತೊಳೆದು ಸ್ವಚ್ಛಗೊಳಿಸಬೇಕು
ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರ ವಿಲೇವಾರಿ ಮಾಡುವುದು
ಕಟ್ಟಡಗಳ ಟೆರೇಸ್ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಕೈಗೊಳ್ಳುವುದು
ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚಾರಪಡಿಸುವುದು
ಪೋಷಕರ ಸಭೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಅರಿವು ಮೂಡಿಸುವುದು ಹಾಗೂ ಪೋಷಕರ ವಾಟ್ಸಪ್ ಗ್ರೂಪ್ ಗಳಿಗೆ ಮಾಹಿತಿ ಹಂಚುವುದು
ಸೊಳ್ಳೆ ನಿರೋಧಕಗಳನ್ನು ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಪೂರೈಸುವುದು
ಶಾಲೆಗಳ ಅಕ್ಕಪಕ್ಕ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಕ್ರಮವಹಿಸುವುದು
ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆದುಕೊಳ್ಳುವುದು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read