HomeKarnatakaಡೆಂಗ್ಯೂ ಪ್ರಕರಣ ಹೆಚ್ಚಳ: ಆಸ್ಪತ್ರೆ, ಪಾಲಿಕೆಗಳಿಗೆ ಅಲರ್ಟ್ ಆಗುವಂತೆ ಸೂಚನೆ

ಡೆಂಗ್ಯೂ ಪ್ರಕರಣ ಹೆಚ್ಚಳ: ಆಸ್ಪತ್ರೆ, ಪಾಲಿಕೆಗಳಿಗೆ ಅಲರ್ಟ್ ಆಗುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಡೆಂಗ್ಯೂ ಪ್ರಕರಣಗಳ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಪಾಲಿಕೆಗಳಿಗೂ ತಿಳಿಸಲಾಗಿದೆ. ಮಹಾನಗರ ಪಾಲಿಕೆಗಳು ಫಾಗಿಂಗ್ ಸಿಂಪಡಣೆ, ಸ್ವಚ್ಛತೆ ಕಾಪಾಡಬೇಕು ಎಂದರು.

ಈಗಾಗಲೇ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ. ಜನರು ಕೂಡ ಹೆಚ್ಚಿನ ಜಾಗೃತೆ ವಹಿಸುವ ಅಗತ್ಯವಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular