HomeKarnatakaBIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ.

ಈ ವರ್ಷ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ 8,563ಕ್ಕೆ ಏರಿಕೆಯಾಗಿದೆ. ಮೊದಲ 6 ತಿಂಗಳಲ್ಲಿ 2 ಸಾವಿರ ಪ್ರಕರಣಗಳು ಪತ್ತೆಯಾಗಿದ್ದರೆ. ಮುಂದಿನ ಮೂರು ತಿಂಗಳಲ್ಲಿ 6 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. 90 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಈಗಾಗಲೇ ತಪಾಸಣೆಗೆ ಒಳಪಡಿಸಲಾಗಿದೆ. 50 ಸಾವಿರಕ್ಕೂ ಅಧಿಕ ಜನರ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವರ್ಷ 9, 620 ಡೆಂಗಿ ಪ್ರಕರಣ ರಾಜ್ಯದಲ್ಲಿ ಪತ್ತೆಯಾಗಿತ್ತು. ಅವರಲ್ಲಿ 9 ಜನರು ಜ್ವರದ ತೀವ್ರತೆಗೆ ಮೃತಪಟ್ಟಿದ್ದರು. ಈ ವರ್ಷ ರಾಜ್ಯದಲ್ಲಿ ಇನ್ನೂ ಮರಣ ವರದಿಯಾಗಿಲ್ಲ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಅತ್ಯಧಿಕ ಡೆಂಗಿ ಪ್ರಕರಣ ಪತ್ತೆಯಾಗಿವೆ. ರಾಜ್ಯದ ಒಟ್ಟು ಡೆಂಗಿ ಪ್ರಕರಣಗಳ ಅರ್ಧದಷ್ಟು ಪ್ರಕರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೃಢಪಟ್ಟಿವೆ. 9,788 ಜನರ ರಕ್ತ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ 4,979 ಜನರಲ್ಲಿ ಡೆಂಗಿ ದೃಢಪಟ್ಟಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2,010 ಜನರಲ್ಲಿ ಡೆಂಗಿ ದೃಢಪಟ್ಟಿದೆ.

ಮೈಸೂರಿನಲ್ಲಿ 430, ಉಡುಪಿಯಲ್ಲಿ 346, ದಕ್ಷಿಣ ಕನ್ನಡ 178, ವಿಜಯಪುರ 170, ಕಲಬುರ್ಗಿ 176, ಚಿತ್ರದುರ್ಗ 158, ಬೆಳಗಾವಿ 149, ಹಾಸನ 139, ದಾವಣಗೆರೆ 134, ಚಿಕ್ಕಮಗಳೂರು 128, ಧಾರವಾಡ 115, ಕೊಡಗು 110, ತುಮಕೂರು 122 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಪ್ರಕರಣ ಪತ್ತೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular