ಬೆಂಗಳೂರಿನಲ್ಲಿ ‘ಡೆಂಗ್ಯೂ’ ಆತಂಕ : ‘BBMP’ ಯಿಂದ ಮಹತ್ವದ ಕ್ರಮ..!

ಬೆಂಗಳೂರು : ಬೆಂಗಳೂರಿನಲ್ಲಿ ಡೆಂಗ್ಯೂ ಹರಡುವುದನ್ನು ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ ನಡೆಸಿ, ಜಾಗೃತಿ ಮೂಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷಕರು, ಆಶಾ ಕಾರ್ಯಕರ್ತೆಯsರು, ಎಎನ್ಎಂ ಹಾಗೂ ಲಿಂಕ್ ವರ್ಕರ್ಗಳು ಒಂದು ಸಾವಿರ ಮನೆಗಳಿಗೆ ಒಂದು ಬ್ಲಾಕ್ ರಚಿಸಿಕೊಳ್ಳಲಿದ್ದಾರೆ. ಅವರು, ಲಾರ್ವಾ ಇರುವ ತಾಣಗಳನ್ನು ಗುರುತಿಸುವ ಜೊತೆಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಯಾರಿಗಾದರೂ ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸುತ್ತಾರೆ. ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿದ ವರದಿಯನ್ನು ನೀಡಲು ವಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಮಹದೇವಪುರ, ದಕ್ಷಿಣ ವಲಯ ಹಾಗೂ ಪೂರ್ವ ವಲಯಗಳಲ್ಲಿ ಡೆಂಘಿ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ಆ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತೋಟಗಾರಿಕಾ, ಅರಣ್ಯ, ಘನತ್ಯಾಜ್ಯ, ಬೃಹತ್ ನೀರುಗಾಲುವೆ, ರಸ್ತೆ ಮೂಲಸೌಕರ್ಯ ವಿಭಾಗ ಸೇರಿದಂತೆ ಇನ್ನಿತರ ವಿಭಾಗಗಳ ಜೊತೆ ವಲಯವಾರು ಸಮನ್ವಯ ಸಾಧಿಸಿ, ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮ ವಹಿಸಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read