HomeKarnatakaBREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

BREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಹೊಳೆನರಸೀಪುರ ತಾಲ್ಲೂಕು ಗುಡ್ಡೇನಹಳ್ಳಿ ನಿವಾಸಿ ಲೋಕೇಶ್ ಮತ್ತು ತನುಜಾ ದಂಪತಿಯ ಪುತ್ರಿ ಕಲಾಶ್ರೀ(11) ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ.

ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ ಕಲಾಶ್ರೀ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜೂನ್ 28ರಂದು ಹಳ್ಳಿಮೈಸೂರು ಹೋಬಳಿಯ ವರ್ಷಿಕಾ(8) ಮೃತಪಟ್ಟಿದ್ದರು. ಹೊಳೆನರಸೀಪುರ ತಾಲೂಕಿನಲ್ಲಿ ಡೆಂಘೀ ಜ್ವರ ಉಲ್ಬಣಗೊಂಡಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular