ಹೆಚ್ಚಿದ ಡೆಂಘೀ ಹಾವಳಿ ತಕ್ಷಣ ನಿಯಂತ್ರಣಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.

ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಕೇಸ್ ಪ್ರಕರಣಗಳು ಪತ್ತೆಯಾಗಿದ್ದು, ಕೇವಲ 51 ಹಾಟ್ ಸ್ಪಾಟ್ ಗಳು ಇವೆ ಎಂದು ಬಿಬಿಎಂಪಿ ಹೇಳುತ್ತಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಸೊಳ್ಳೆಗಳ ಹಾವಳಿ ಇನ್ನು ಹೆಚ್ಚಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಹೈಕೋರ್ಟ್ ನೀಡಿದೆ.

ಸೊಳ್ಳೆ ಸಂತಾನೋತ್ಪತ್ತಿ ಪರಿಸರ ಸೃಷ್ಟಿಸಿದವರಿಗೆ ದಂಡ ವಿಧಿಸಬೇಕು. ಸೊಳ್ಳೆ ಹೆಚ್ಚದಂತೆ ತಡೆಯಲು ಕೈಗೊಂಡ ಕ್ರಮಗಳ ಕುರಿತಾಗಿ ಮಾಹಿತಿ ನೀಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಪತ್ತೆ ಹಚ್ಚಬೇಕು. ಕಸದ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮಗಳ ಬಗ್ಗೆ ಆಗಸ್ಟ್ 28ರೊಳಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read