HomeKarnatakaರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ: ಜ್ವರ, ನೆಗಡಿಯಿಂದ ಜನ ಹೈರಾಣ

ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ: ಜ್ವರ, ನೆಗಡಿಯಿಂದ ಜನ ಹೈರಾಣ

ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 5187 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ.

ಬೆಂಗಳೂರು ಸೇರಿದಂತೆ ವಿವಿಧೆಡೆ ಡೆಂಗ್ಯೂ ಜ್ವರ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. ಜ್ವರ, ನೆಗಡಿಯಿಂದ ಬಳಲುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1230, ರಾಜ್ಯದಲ್ಲಿ 3975 ಪ್ರಕರಣ ಪತ್ತೆಯಾಗಿದೆ. ಜೂನ್ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ.

ರಾಜ್ಯದಲ್ಲಿ 37,144 ಜನರ ರಕ್ತ ಮಾದರಿ ಪಡೆಯಲಾಗಿದ್ದು, 3975 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಇದುವರೆಗೆ 5187 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1230 ಪ್ರಕರಣ, ಹಾವೇರಿಯಲ್ಲಿ 389 ಪ್ರಕರಣ ಪತ್ತೆಯಾಗಿದ್ದು, 12 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಮೈಸೂರಿನಲ್ಲಿ 358, ಚಿಕ್ಕಮಗಳೂರು 346, ಕಲಬುರಗಿ ಜಿಲ್ಲೆಯಲ್ಲಿ 153 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಈಗಾಗಲೇ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular